ಕಾರ್ಕಳ: ವಿಪರೀತ ಮದ್ಯಪಾನದ ಚಟ ಹೊಂದಿದ್ದ 18 ವರ್ಷ ಹರೆಯದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಾರ್ಕಳದ ಬಂಗ್ಲೆಗುಡ್ಡೆಯ ಹಿಮ್ಮುಂಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಹಿಮ್ಮುಂಜೆ ನಿವಾಸಿ ಕುಮಾರ ಎಂಬವರ ಮಗ ಅರುಣ್ ಕುಮಾರ್ (18) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತ ಶಾಲೆಯನ್ನು ಅರ್ಧಕ್ಕೆ ಬಿಟ್ಟು ಮಿಕ್ಸಿ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮಾರಾಟ ಮಾಡಿಕೊಂಡಿದ್ದ. ಇದಲ್ಲದೇ ಮದ್ಯಪಾನ ಚಟ ಹೊಂದಿದ್ದ.ಇತ್ತೀಚಿನ ದಿನಗಳಲ್ಲಿ ಕೆಲಸಕ್ಕೆ ಹೋಗದೇ ವಿಪರೀತ ಮದ್ಯಪಾನ ಮಾಡುತ್ತಿದ್ದು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾನೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
K