Share this news

ಉಡುಪಿ : ಕಾರ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ನಾಗರಿಕರನ್ನು ಕಾರ್ಕಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಕಳ ಪೊಲೀಸರು ವಶಕ್ಕೆ ಪಡೆದ ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಅಧಿಕೃತವಾಗಿ ಬಂಧಿಸುವ ಸಾಧ್ಯತೆಯಿದೆ.

ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ವಾಸವಿದ್ದ 8 ಮಂದಿ ಬಾಂಗ್ಲಾ ದೇಶದ ನಾಗರಿಕರನ್ನು ಬಂಧಿಸಲಾಗಿತ್ತು. ಕಟ್ಟಡ ಕಾರ್ಮಿಕ ಸೋಗಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅವರ ಬಳಿ ನಕಲಿ ಆಧಾರ್ ಕಾರ್ಡ್, ಅದರ ಆಧಾರದಲ್ಲಿ ಖರೀದಿಸಿದ ಮೊಬೈಲ್‌ಗಳು ಪತ್ತೆಯಾಗಿದ್ದವು. ಒಬ್ಬಾತನಿಂದ ನಕಲಿ ಪಾಸ್‌ಪೋರ್ಟ್‌ನ್ನು ಕೂಡ ವಶಪಡಿಸಿಕೊಳ್ಳಲಾಗಿತ್ತು.ಬಂಧಿತರಿಂದ ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವುದು ಪತ್ತೆಯಾಗಿದ್ದು ಅದರಂತೆ ಕಾರ್ಕಳದಲ್ಲಿ ನೆಲೆಸಿದ್ದ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮಹಜರು ನಡೆಸಿ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *