
ಕಾರ್ಕಳ,ಜ.01: ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದ ಅವರನ್ನು ವರ್ಗಾವಣೆಗೊಳಿಸಿ ಪೊಲೀಸ್ ಅಧೀಕ್ಷಕಿಯಾಗಿ (ಎಸ್ಪಿ) ಪ್ರಮೋಷನ್ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅವರನ್ನು ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ.
2020ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಎಂಬಿಬಿಎಸ್ ಪದವೀಧರೆ. 2025ರ ಫೆಬ್ರವರಿಯಲ್ಲಿ ಕಾರ್ಕಳ ಎಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಇವರು ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಮರಳು ಸಾಗಾಟ ದಂಧೆಗೆ ಬಿಸಿ ಮುಟ್ಟಿಸಿದ್ದರು ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.


.
.
