Share this news

ಕಾರ್ಕಳ: ಬೈಲೂರು-ಉಮಿಕ್ಕಳ ಬೆಟ್ಟದ ಮೇಲಿನ ಪರಶುರಾಮ ಥೀಂ ಪಾರ್ಕ್ ಯೋಜನೆ ಕುರಿತು ನಿರಂತರ ಅಪಪ್ರಚಾರ, ಸಾರ್ವಜನಿಕ ಆಸ್ತಿ- ಪಾಸ್ತಿ ಹಾನಿ ಹಾಗೂ ಕಾನೂನು ಉಲ್ಲಂಘನೆ ಮಾಡಿದವರ ಕುರಿತು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಕಾರ್ಕಳ ಬಿಜೆಪಿ ನಿಯೋಗದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸದರಿ ಯೋಜನೆ ಕುರಿತಂತೆ ಒಂದು ವರ್ಷದ ಬಳಿಕ ಯೋಜನೆಯ ಅನುಷ್ಠಾನ ಅಧಿಕಾರಿ ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿರುವ ಜಿಲ್ಲಾಡಳಿತ ಕ್ರಮ ಸ್ವಾಗತಾರ್ಹವಾಗಿದೆ. ಆರಂಭದಿAದಲೇ ಜಿಲ್ಲಾಡಳಿತ ಇಂತಹ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುತ್ತಿದ್ದರೆ ಪ್ರವಾಸಿ ಯೋಜನೆಯೊಂದರ ಕುರಿತು ಇಷ್ಟೊಂದುಅಪಪ್ರಚಾರಗಳಿಗೆ ಒಳಗಾಗುತ್ತಿರಲಿಲ್ಲ, ತನಿಖೆ ನಡೆದು ಕಾಮಗಾರಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿತ್ತು, ತಡವಾಗಿ ಜಿಲ್ಲಾಡಳಿತ ಎಚ್ಚರಗೊಂಡಿದೆ.
ಜಿಲ್ಲಾಧಿಕಾರಿಗಳ ಈ ಕ್ರಮ ಇಷ್ಟಕ್ಕೆ ಸೀಮಿತವಾಗದೇ ಯೋಜನೆ ಕುರಿತು ಒಂದು ವರುಷದಿಂದ ಸಾಮಾಜಿಕ ಜಾಲತಾಣಗಳಲ್ಲಿ, ಸಭೆಗಳಲ್ಲಿ, ಮಾಧ್ಯಮಗಳಲ್ಲಿ ಭ್ರಷ್ಟಾಚಾರ ನಡೆದಿದೆ, ನಕಲಿ ಮೂರ್ತಿ ಎಂದು ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಈ ಅಪಪ್ರಚಾರ ಯಾರೆಲ್ಲ ಮಾಡಿದ್ದಾರೆ, ಅವರ ವಿರುದ್ಧವೂ ತಾವು ತಕ್ಷಣ ಕ್ರಮಕೈಗೊಳ್ಳಬೇಕು. ಥೀಮ್ ಪಾರ್ಕಿಗೆ ಸಾರ್ವಜನಿಕ ಪ್ರವೇಶ ನಿಷೇಧವಿದ್ದರೂ, ಅಕ್ರಮವಾಗಿ ಪ್ರವೇಶ ಮಾಡಿ ಸಾರ್ವಜನಿಕ ಸ್ವತ್ತನ್ನು ಹಾನಿ ಮಾಡಿ, ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧವೂ ತಾವು ಕ್ರಮ ಕೈಗೊಳ್ಳಬೇಕು. ಉಚ್ಛ ನ್ಯಾಯಾಲಯದ ಆದೇಶದಂತೆ ಜಿಲ್ಲಾಡಳಿತ ಕಾಮಗಾರಿ ಮುಂದುವರೆಸಲು ಅನುವು ಮಾಡಿಕೊಟ್ಟಾಗ ರಾತ್ರೋರಾತ್ರಿ ಪರಶುರಾಮ ಥೀಂ ಪಾರ್ಕ್ ಬೆಟ್ಟಕ್ಕೆ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಮಣ್ಣು ಹಾಕಿ ರಸ್ತೆ ತಡೆ ಮಾಡಿ, ಕಾಮಗಾರಿಗೆ ಅಡ್ಡಿಪಡಿಸಿದವರ ವಿರುದ್ಧವೂ ಜಿಲ್ಲಾಡಳಿತ ಇದುವರೆಗೆ ಕ್ರಮ ಕೈಗೊಂಡಿರುವುದಿಲ್ಲ. ಪರಶುರಾಮ ಥೀಂ ಪಾರ್ಕ್ ಕಾಮಗಾರಿಗೆ ಸಂಬAಧಿಸಿದAತೆ ಸುಳ್ಳು ಅಪಪ್ರಚಾರ, ಕಾಮಗಾರಿಗೆ ಅಡ್ಡಿಪಡಿಸಿದ, ಕಾನೂನು ಬಾಹಿರವಾಗಿ ಪ್ರವೇಶ ಮಾಡಿ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡಿದವರ ವಿರುದ್ಧ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕ ಪ್ರವೇಶಕ್ಕೆ ಅನುವು ಮಾಡಿಕೊಡುವಂತೆ ಬಿಜೆಪಿ ನಿಯೋಗವು ಜಿಲ್ಲಾಧಿಕಾರಿಗೆ ನೀಡಿದ ಮನವಿಯಲ್ಲಿ ಉಲ್ಲೇಖಿಸಿದೆ.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳದ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಶ್ಮಾ ಉದಯ್ ಶೆಟ್ಟಿ, ಉಪಾಧ್ಯಕ್ಷ ಕಿರಣ್ ಕುಮಾರ್ ಉಡುಪಿ, ಬೋಳ ಜಯರಾಮ್ ಸಾಲ್ಯಾನ್, ಉದಯ್ ಎಸ್ ಕೋಟ್ಯಾನ್, ಕಾರ್ಕಳ ಬಿಜೆಪಿ ವಕ್ತಾರರಾದ ರವೀಂದ್ರ ಮೊಯ್ಲಿ, ಕಾರ್ಕಳ ನಗರಾಧ್ಯಕ್ಷ ನಿರಂಜನ್ ಜೈನ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕಾಬೆಟ್ಟು, ಶ್ರೀ ವಿಘ್ನೇಶ್ ರಾವ್ ಬಂಗ್ಲೆಗುಡ್ಡೆ, ಬಿಜೆಪಿ ಪ್ರಮುಖರಾದ ಸೂರ್ಯಕಾಂತ ಶೆಟ್ಟಿ ಕೆದಿಂಜೆ, ದೇವೇಂದ್ರ ಶೆಟ್ಟಿ ಬೆಳ್ಮಣ್, ಶಂಕರ್ ಕುಂದರ್ ಸೂಡ, ಯುವ ಮೋರ್ಚಾದ ರಜತ್ರಾಮ್ ಮೋಹನ್, ರೈತ ಮೋರ್ಚಾದ ಮೋಹನ್ ಶೆಟ್ಟಿ ಬೋಳ, ಸುನಿಲ್ ಪೂಜಾರಿ ಚಾರಾ, ಹೆಬ್ರಿ ತಾಲೂಕು ರಿಕ್ಷಾ ಚಾಲಕ-ಮಾಲಕ ಸಂಘದ ಅಧ್ಯಕ್ಷ ಪ್ರಭಾಕರ್ ಪೂಜಾರಿ ಉಪಸ್ಥಿತರಿದ್ದರು.

                        

                          

                        

                          

 

`

Leave a Reply

Your email address will not be published. Required fields are marked *