Share this news

ಕಾರ್ಕಳ: ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ನ.23 ರರಂದು ಉಪಚುನಾವಣೆ ನಡೆದಿದ್ದು, ಇಂದು (ನ.26) ಕಾರ್ಕಳ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ತಾಲೂಕಿನ 6 ಗ್ರಾಮ ಪಂಚಾಯತ್‌ಗಳಲ್ಲಿ 8 ಸ್ಥಾನಗಳ ಪೈಕಿ 5 ಬಿಜೆಪಿ ಬೆಂಬಲಿತ ಹಾಗೂ 3 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಕೆರ್ವಾಶೆ ಪಂಚಾಯತ್‌ನಲ್ಲಿ ತೆರವಾಗಿದ್ದ 1 ಸದಸ್ಯ ಸ್ಥಾನಕ್ಕೆ(ಸಾಮಾನ್ಯ ಮೀಸಲಾತಿ) ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಧರ್ಮರಾಜ ಹೆಗ್ಡೆ ಅವರು ಕಾಂಗ್ರೆಸ್‌ನ ಅಭ್ಯರ್ಥಿ ನಾರಾಯಣ ನಾಯಕ್ ರಿಂದ 154 ಮತಗಳ ಅಂತರದಲ್ಲಿ ಗೆಲುವುಸಾಧಿಸಿದ್ದಾರೆ.

ಈದು ಪಂಚಾಯತ್‌ನಲ್ಲಿ ಖಾಲಿ ಇದ್ದ 1 ಸ್ಥಾನಕ್ಕೆ(ಅನುಸೂಚಿತ ಪಂಗಡ ಮತ್ತು ಮಹಿಳಾ ಮೀಸಲಾತಿ) ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 204 ಮತ ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಜಯಂತಿ 296 ಮತ ಪಡೆದು 92 ಮತಗಳ ಅಂತರದಲ್ಲಿ ಜಯಶಾಲಿಯಾಗಿದ್ದಾರೆ.

ನಿಟ್ಟೆ ಗ್ರಾಮ ಪಂಚಾಯತ್‌ನಲ್ಲಿ (ಸಾಮಾನ್ಯ ಮಹಿಳೆ ಮೀಸಲಾತಿ) ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಜ್ಯೋತಿ ರೀನಾ ಡಿ’ಸೋಜಾ 352 ಮತ ಪಡೆದು ಕಾಂಗ್ರೆಸ್ ನ ಲಿನೆಟ್ ಮರೀನಾ ಡಿ’ಸೋಜಾ ಅವರಿಂದ 124 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಕಡ್ತಲ ಪಂಚಾಯತ್‌ನಲ್ಲಿ ತೆರವಾಗಿದ್ದ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ದಿಕ್ಷಿತ್ ಶೆಟ್ಟಿ ಅವರು ಬಿಜೆಪಿಯ ಗುಣವತಿ ಅರವಿಂದ ಹೆಗ್ಡೆ ಅವರ ವಿರುದ್ಧ 87 ಮತಗಳ ಅಂತರದಿAದ ಜಯ ಸಾಧಿಸಿದ್ದಾರೆ.

ನಲ್ಲೂರು ಪಂಚಾಯತ್‌ನ 1 ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಸವಿತಾ ಶ್ರೀಧರ್ 321 ಮತ ಪಡೆದು ಬಿಜೆಪಿ ಬೆಂಬಲಿತ ಸುಮತಿ ಅವರಿಂದ 65 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ನೀರೆ ಪಂಚಾಯತ್‌ನಲ್ಲಿ 3 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, (ಅ.ಪಂ.ಮಹಿಳಾ ಮೀಸಲಾತಿ) ರಲ್ಲಿ ಖಾಲಿ ಇದ್ದ 1 ಸ್ಥಾನಕ್ಕೆ ಕಾಂಗ್ರೆಸ್‌ನಿAದ ಸೌಮ್ಯ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. (ಹಿಂದುಳಿದ ಅ ವರ್ಗ/ಸಾಮಾನ್ಯ)ರಲ್ಲಿ ಖಾಲಿ ಇದ್ದ 2 ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಸನ್ನ ಆಚಾರ್ಯ ಹಾಗೂ ಮಹೇಶ್ ಅವರು ಗೆಲುವು ಸಾಧಿಸಿದ್ದಾರೆ.

ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.

ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.

ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.

ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.

ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.

Leave a Reply

Your email address will not be published. Required fields are marked *