ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಸಂಘದ ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ಬೆಂಬಲ ಸೂಚಿಸಲಾಯಿತು.
ಇಂದು ಕಾರ್ಕಳ ತಾಲೂಕು ಕಚೇರಿಯ ಎದುರು ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಕಾರ್ಕಳ ಬಿಜೆಪಿ ಮಂಡಲ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ನೇತೃತ್ವದ ಬಿಜೆಪಿ ನಿಯೋಗವು ಭೇಟಿ ನೀಡಿ ಅವರ ಅಹವಾಲು ಹಾಗೂ ಮನವಿಯನ್ನು ಸ್ವೀಕರಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸರಕಾರವನ್ನು ಆಗ್ರಹಿಸುವುದಾಗಿ ಹಾಗೂ ಕಾರ್ಕಳ ಕ್ಷೇತ್ರದ ಶಾಸಕ ವಿ ಸುನಿಲ್ ಕುಮಾರ್ ಅವರ ಮುಖಾಂತರ ಮುಂದಿನ ಬಜೆಟ್ ಅಧಿವೇಶನದಲ್ಲಿ ಗ್ರಾಮ ಆಡಳಿತ
ಅಧಿಕಾರಿಗಳ ಸಮಸ್ಯೆಗಳ ಕುರಿತು ಧ್ವನಿಯಾಗಿ ಸರ್ಕಾರದ ಗಮನ ಸೆಳೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಹುಟ್ಟಿನಿಂದ ಮರಣದ ತನಕ ಪ್ರತಿಯೊಂದು ಹಂತದಲ್ಲಿಯೂ, ಸರಕಾರದ ಯೋಜನೆಗಳನ್ನು ಸಕಾಲದಲ್ಲಿ ಅರ್ಹರಿಗೆ ತಲುಪಿಸುವ ವಿಷಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಕರ್ತವ್ಯವು ಬಹಳ ದೊಡ್ಡ ಪ್ರಮಾಣದಲ್ಲಿದ್ದು ಗ್ರಾಮಮಟ್ಟದಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳ ಕುರಿತು ಸರ್ಕಾರ ಆದಷ್ಟು ಶೀಘ್ರವಾಗಿ ಗಮನಹರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಸಾಲ್ಯಾನ್, ಉದಯ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೇಷ್ಮಾ ಉದಯ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್ ಪೂಜಾರಿ, ಕಾರ್ಯದರ್ಶಿಗಳಾದ ಪ್ರವೀಣ್ ಸಾಲ್ಯಾನ್, ಪುರಸಭಾ ಅಧ್ಯಕ್ಷರಾದ ಯೋಗೀಶ್ ದೇವಾಡಿಗ, ಪುರಸಭಾ ಸದಸ್ಯರಾದ ಶ್ರೀಮತಿ ಪಲ್ಲವಿ, ಉಪಾಧ್ಯಕ್ಷರಾದ ಪ್ರಶಾಂತ್ ಕೋಟ್ಯಾನ್, ನಗರಾಧ್ಯಕ್ಷರಾದ ನಿರಂಜನ್ ಜೈನ್, ಸೋಜನ್ ಪಿ.ಜೇಮ್ಸ್, ಸೂರ್ಯಕಾಂತ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರದೀಪ್ ರಾಣೆ, ಮೋಹನ್ ಶೆಟ್ಟಿ ಬೋಳ, ಕಿರಣ್ ಶೆಟ್ಟಿ ಬೋಳ, ಸುರೇಶ್ ಅತ್ತೂರು ಉಪಸ್ಥಿತರಿದ್ದರು