
ಕಾರ್ಕಳ,ಜೂ.19: ಕಾರ್ಕಳ ತಾಲೂಕಿನ ಮಿಯ್ಯಾರು ಜೋಡುಕಟ್ಟೆಯಲ್ಲಿ ಖಾಸಗಿ ಬಸ್ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ.
ಇಂದು (ಜೂ. 19) ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಕಾರ್ಕಳ ಕಡೆಯಿಂದ ಬರುತ್ತಿದ್ದ ರಿಕ್ಷಾ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದಲ್ಲಿ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ ಮುಂಭಾಗ ಜಖಂಗೊಂಡಿದೆ. ಗಾಯಗೊಂಡ ರಿಕ್ಷಾ ಚಾಲಕ ಚಂದ್ರಕಾಂತ್ ಶೆಣೈ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
