ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನೂರಾರು ಜನಪರ ಯೋಜನೆಗಳನ್ನು ಜಾತಿ ಜಾರಿಗೊಳಿಸಲಾಗಿದ್ದು, ಸರ್ಕಾರದ ಜನೋಪಯೋಗಿ ಯೋಜನೆಗಳ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸಿ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಆರೋಪಿಸಿದ್ದಾರೆ.
ಅವರು ಜೂ 23 ರಂದು ಕಾರ್ಕಳದ ಬಸ್ಸು ನಿಲ್ದಾಣದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಂಚ ಗ್ಯಾರಂಟಿಗಳ ಯಶಸ್ಸನ್ನು ಸಹಿಸಲಾಗದೇ ಬಿಜೆಪಿ ಯವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಕಾರ್ಕಳವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲಾಗುವುದು ಎಂದ ಶಾಸಕರು ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಧಾರ್ಮಿಕ ಭಾವನೆಗೆ ದ್ರೋಹ ಬಗೆದಿದ್ದಾರೆ ಎಂದರು.
ಹಿರಿಯ ನಾಗರಿಕರ ಪಿಂಚಣಿ ಯೋಜನೆ ರದ್ದಾಗುತ್ತದೆ ಎಂದು ಅಮಾಯಕ ಜನರನ್ನು ಸುಳ್ಳು ಹೇಳಿ ಪ್ರತಿಭಟನೆಗೆ ಕರೆದ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಪಿಂಚಣಿ ರದ್ದಾಗಿರುವುದಕ್ಕೆ ನಿಮ್ಮಲ್ಲಿ ಆದೇಶ ಇದೆಯೇ ಎಂದು ಪ್ರಶ್ನಿಸಿದರು.ಅಕ್ರಮ ಸಕ್ರಮ ಯೋಜನೆಯ ಅರ್ಜಿಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರಸ್ಕೃತವಾಗಿದ್ದರೂ ಶಾಸಕರು ಈಗ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಅಧ್ಯಕ್ಷ ಮಾತನಾಡಿ,ಆಶ್ರಯ ಯೋಜನೆ ಕಾಂಗ್ರೆಸ್ ಕೊಡುಗೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ.ವಿದ್ಯುತ್ ದರ ಏರಿಕೆ ಪಿತಾಮಹ ಸುನಿಲ್ ಕುಮಾರ್ ಕುಮಾರ್ ಅವರು ದರ ಏರಿಸಿ ಒಂದು ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಪುರಸಭೆ ವ್ಯಾಪ್ತಿಯಲ್ಲಿನ 13 ಕೋಟಿ ವೆಚ್ಚದ ಒಳಚರಂಡಿ ಅಸಮರ್ಪಕ ಕಾಮಗಾರಿ ಪರಿಣಾಮ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಈ ಅವ್ಯವಸ್ಥೆಗೆ ಬಿಜೆಪಿ ಕಾರಣ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಸುಧಾಕರ ಕೋಟ್ಯಾನ್, ಸುಭೀತ್ ಎನ್.ಆರ್, ಜಾರ್ಜ್ ಕ್ಯಾಸ್ಟಲಿನೋ ಮುಂತಾದವರು ಉಪಸ್ಥಿತರಿದ್ದರು