
ಕಾರ್ಕಳ, ಜೂ.16: ಕಾರ್ಕಳ ತಾಲೂಕು ಈದು ಗ್ರಾಮದ ಪೊಲೀಸ್ ಚೆಕ್ ಪೋಸ್ಟ್ ಬಳಿಯ ಒರಿಮಾರು ಕ್ರಾಸ್ ಎಂಬಲ್ಲಿ ಕಾರ್ಕಳ ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಬೈಕಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈದು ನಿವಾಸಿ ರೋಹಿತ್ ಎಂಬವರು ಉಜಿರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಒರಿಮಾರು ಕ್ರಾಸ್ ಎಂಬಲ್ಲಿ ಕಾರ್ಕಳ ಕಡೆಯಿಂದ ನಾರಾವಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ರೋಹಿತ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
