ಕಾರ್ಕಳ: ಕಾರ್ಕಳ ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಬೆಟ್ಟು ಬೆದ್ರಪಲ್ಕೆ ಎಂಬಲ್ಲಿ ಸ್ವರ್ಣ ನದಿ ತೀರದಲ್ಲಿ ದನದ ರುಂಡವೊAದು ಪತ್ತೆಯಾಗಿದೆ.
ಭಾನುವಾರ ರಾತ್ರಿ ನದಿ ತೀರದಲ್ಲಿ ರುಂಡ ಇರುವುದು ಸ್ಥಳೀಯರಿಗೆ ಗೊತ್ತಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಶಂಕೆ ವ್ಯಕ್ತವಾಗಿದೆ. ಹಸು ದೇಹದ ಭಾಗಗಳು ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೌಡಾಯಿಸಿದರು.
ಹಿಂದೂ ಜಾಗರಣ ವೇದಿಕೆಯು ಘಟನೆಯನ್ನು ತೀವೃವಾಗಿ ಖಂಡಿಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಯನ್ನು ಕೆರಳಿಸುವ ಇಂತಹ ಕೃತ್ಯಗಳು ನಿರಂತವಾಗಿ ನಡೆಯುತ್ತಿದ್ದರೂ ಸರಕಾರ ಅಕ್ರಮ ಗೋಸಾಗಾಟವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ತನಿಖೆ ನಡೆಸಿ ಶೀಘ್ರ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಬೇಕೆAದು ಆಗ್ರಹಿಸಿದ್ದಾರೆ.’