ಕಾರ್ಕಳ:ನಕ್ಸಲ್ ಸಮಸ್ಯೆ ಕೇವಲ ಕರ್ನಾಟಕ ರಾಜ್ಯದ ಸಮಸ್ಯೆಯಲ್ಲ ಇದು ದೇಶದಾದ್ಯಂತ ಇರುವಂತಹ ರಾಷ್ಟ್ರೀಯ ಸಮಸ್ಯೆಯಾಗಿದೆ. ದೇಶದ ಭದ್ರತೆಗೂ ನಕ್ಸಲೀಯರು ತೊಡಕನ್ನುಂಟು ಮಾಡುತ್ತಿದ್ದಾರೆ. ನಕ್ಸಲ್ ದಾಳಿಗಳಿಂದಾಗಿ ಹಲವಾರು ರಾಜ್ಯಗಳಲ್ಲಿ ನಮ್ಮ ಭದ್ರತಾ ಪಡೆಗಳ ಜವಾನರು ಪೊಲೀಸರು ಬಲಿಯಾಗಿರುವುದು ವರದಿಯಾಗುತ್ತಿವೆ.
ನಕ್ಸಲ್ ದಾಳಿಗಳಿಗೆ ನಮ್ಮ ವೀರ ಸೈನಿಕರು, ಪೊಲೀಸರು ಬಲಿಯಾಗಿರುವ ಘಟನೆಗಳು ಇವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಸವಾಲಾಗಿರುವ, ದೇಶದ ಭದ್ರತೆಗೆ ಕಂಟಕರಾಗಿರುವ ನಕ್ಸಲ್ ಸಮಸ್ಯೆಯ ಮೂಲೋತ್ಪಾಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡುವುದು ಸದ್ಯದ ಅನಿವಾರ್ಯತೆಯಾಗಿದೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿಯೂ ನಕ್ಸಲ್ ಸಮಸ್ಯೆಯು ತಲೆದೋರುತ್ತಿದೆ. ಒಂದು ರಾಷ್ಟ್ರೀಯ ಸಮಸ್ಯೆ, ದೇಶದ ಭದ್ರತೆಗೆ ಸವಾಲಾಗಿರುವ ವಿಚಾರವನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ನಕ್ಸಲ್ ಸಮಸ್ಯೆ ಹುಟ್ಟಿಕೊಂಡಿದೆ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡುವ ಶಾಸಕ ಸುನೀಲ್ ಕುಮಾರ್ ಅವರದ್ದು ಬೌಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ತಮ್ಮ ಮೇಲೆ ದಾಳಿ ನಡೆದರೂ ಜೀವದ ಹಂಗು ತೊರೆದು ನಕ್ಸಲ್ ದಾಳಿಯನ್ನು ದೈರ್ಯವಾಗಿ ಹಿಮ್ಮೆಟ್ಟಿಸಿದ ನಮ್ಮ ಪೋಲೀಸರ ಸಾಹಸ ಕಾರ್ಯವನ್ನು ಒಬ್ಬ ಶಾಸಕನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುನೀಲ್ ಕುಮಾರ್ ಅವರು ಶ್ಲಾಘಿಸುವುದನ್ನು ಬಿಟ್ಟು ಅದರಲ್ಲೂ ಕಾಂಗ್ರೆಸ್ ಬಿಜೆಪಿ ಎಂದು ರಾಜಕೀಯದ ಬಣ್ಣ ಬಳಿಯಲು ಯತ್ನಿಸಿರುವುದು ನಮ್ಮ ಪೊಲೀಸರಿಗೆ ಮಾಡಿದ ಅವಮಾನವಾಗಿದೆ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ಇನ್ನಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
































































































ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
































































































ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.
































































































