

ಕಾರ್ಕಳ,ಆ.27: ಮನೆಯ ಅಂಗಳದಲ್ಲಿ ಕುಳಿತುಕೊಂಡಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ತುಂಬೆಹಿತ್ಲು ಎಂಬಲ್ಲಿ ಸಂಭವಿಸಿದೆ.
ತುAಬೆಹಿತ್ಲು ನಿವಾಸಿ ಗುಲಾಬಿ (79) ಎಂಬವರು ಮೃತಪಟ್ಟ ಮಹಿಳೆ. ಅವರು ಬುಧವಾರ ಸಂಜೆ 6.30 ರ ಸುಮಾರಿಗೆ ಅಂಗಳದಲ್ಲಿದ್ದಾಗ ಹಾವು ಕಚ್ಚಿದೆ. ತಕ್ಷಣವೇ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
