Share this news

 

ಕಾರ್ಕಳ : ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಇಂದು (ಗುರುವಾರ) ಬೆಳಗ್ಗೆ ಖಾಸಗಿ ಬಸ್ಸು ಹಾಗೂ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆದ್ದಾರಿಯ ಅಡ್ವೆ ಅಣ್ಣಾಜಿಗೋಳಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವೃತೆಗೆ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪಡುಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

 

 

 

 

Leave a Reply

Your email address will not be published. Required fields are marked *