ಕಾರ್ಕಳ: ಕಾರ್ಕಳ ತಾಲೂಕು ತೆಳ್ಳಾರು ನಿವಾಸಿ ಕಿಶೋರ್ ಕುಮಾರ್ ಶೆಟ್ಟಿ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಭಾರೀ ಅನಾಹುತದಲ್ಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿದ್ದು, ಮನೆಯವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು (ಫೆ.15) ಮುಂಜಾನೆ 04:28 ರ ವೇಳೆಗೆ ತೆಳ್ಳಾರು ರಸ್ತೆಯ ಮರತ್ತಪ್ಪ ಕಾಲೊನಿಯ ನಿವಾಸವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, .ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣ ಮತ್ತು ಇಲೆಕ್ಟ್ರಾನಿಕ್,ಮನೆ ಸಾಮಾಗ್ರಿಗಳು ಸುಟ್ಟು ಹೋಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದವರು ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಕಾರ್ಯಚರಣಿಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಿಬ್ಬಂದಿಯವರಾದ ಹರಿಪ್ರಸಾದ್ ಶೆಟ್ಟಿಗಾರ್,ಜಯ ಮೂಲ್ಯ, ರವಿಚಂದ್ರ ಪಾಲ್ಗೊಂಡಿದ್ದರು.