

ಕಾರ್ಕಳ : ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ 2123ನೇ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆ ಕಾರ್ಕಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆಯಿತು. ಸಭೆಯನ್ನು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ವೃಷಭ ರಾಜ್ ಕಡಂಬ ಉದ್ಘಾಟಿಸಿ ಹೊಸ ಜೀವನ ನಡೆಸುತ್ತಿರುವ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು 2123ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ವಿಜಯ ಶೆಟ್ಟಿ ವಹಿಸಿ ಶುಭ ಹಾರೈಸಿದರು
ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ, ಸಭೆಯಲ್ಲಿ ನವಜೀವನ ಸಮಿತಿ ಬಲವರ್ಧನೆ ಮತ್ತು ಅನುಪಾಲನೆ, ನವಜೀವನ ಸಮಿತಿ ಸದಸ್ಯರ ವಾರದ ಸಭೆಯ ವರದಿ, ಹಾಜರಾತಿ ಕುರಿತು ,ಫ್ರೀ ಕಾನ್ಫರೆನ್ಸ್ ಸಭೆ, ಶತದಿನೋತ್ಸವ ಕುರಿತು ಮಾಹಿತಿ ನೀಡಿದರು .
ವೇದಿಕೆಯಲ್ಲಿ ತಾಲೂಕು ಜನಜಾಗೃತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷರಾದ ಉದಯ್ ಹೆಗ್ಡೆ, ಜನಜಾಗೃತಿ ವೇದಿಕೆ ಸದಸ್ಯರಾದ ಕಮಲಾಕ್ಷ ನಾಯಕ್ , ಉದಯ್ ಶೆಟ್ಟಿ, ಅಶೋಕ್ ಶೆಟ್ಟಿ, ತಾರಾನಾಥ್ ಶೆಟ್ಟಿ ಹಾಗೂ ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ ಉಪಸ್ಥಿತರಿದ್ದರು.
ಶಿಬಿರಕ್ಕೆ ಸೇರಿ ಪಾನಮುಕ್ತರಾದ ನವ ಜೀವನ ಸಮಿತಿ ಸದಸ್ಯರು ತಮ್ಮ ಒಂದು ತಿಂಗಳ ಪಾನಮುಕ್ತ ಜೀವನದ ಅನುಭವಗಳನ್ನು ಹಂಚಿಕೊAಡರು.ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ವಲಯ ಮೇಲ್ವಿಚಾರಕಿ ಗೀತಾ ಸ್ವಾಗತಿಸಿ , ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ ವಂದಿಸಿದರು.






.
.
.
.
.
.
.
.
.
.
.
.
.
.
.
.
.
.
.
.
