ಕಾರ್ಕಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ,ಅಪಘಾತ ಎಸಗಿದ ಬೈಕ್ ಸವಾರ ವೈದ್ಯಕೀಯ ವೆಚ್ಚ ನೀಡದೇ ವಂಚಿಸಿದ ಪ್ರಕರಣದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕಾರ್ಕಳ ದಾನಶಾಲೆ ನಿವಾಸಿ ಮೋಹನ್ ಕುಮಾರ್ ಗಾಯಗೊಂಡಿದ್ದು,ಅವರು ಮೇ 3 ರಂದು ಬಜಗೋಳಿ ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತುಕೊಂಡಿದ್ದಾಗ ಬೈಕ್ ಸವಾರ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಮೋಹನ್ ಕುಮಾರ್ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೈಕ್ ಸವಾರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿ ಭರಿಸದೇ ವಂಚಿಸಿದ್ದಾನೆ ಎಂದು ಆತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ