Share this news

 

 

 

ಕಾರ್ಕಳ: : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಬಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ.

2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ 8147454906 ಅನ್ನು ಸಂಪರ್ಕಿಸಬಹುದು.

2024-25ರ ಫಲಿತಾಂಶದಲ್ಲಿ ರಕ್ಷಾ ರಾಮ್‌ಚಂದ್ರ ನಾಯಕ್ 597 ಅಂಕಗಳೊAದಿಗೆ ರಾಜ್ಯಕ್ಕೆ 3ನೇ ಸ್ಥಾನಿಯಾಗಿ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ ಸಹನಾ ನಾಯಕ್ ಹಾಗೂ ತನ್ವಿ ರಾವ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 3ನೇ ಸ್ಥಾನಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳಾದ ವಿ. ಯಶಸ್ವಿ ನಾಯ್ಕ್ (591 ಅಂಕ) ಹಾಗೂ ಪ್ರಜ್ಞಾ ಹೆಗ್ಡೆ (591)ಗಳಿಸಿದ್ದಾರೆ.

ಈ ಬಾರಿ 2025ರ ಜನವರಿಯಲ್ಲಿ ನಡೆದ ಸಿ.ಎಸ್.ೆಇ.ಇ.ಟಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ.
ಪಠ್ಯೇತರ ಚಟುವಟಿಕೆಯಲ್ಲಿ ಎನ್.ಸಿ.ಸಿ ಮತು ್ತಎನ್.ಎಸ್.ಎಸ್ ಕಾರ್ಯಚರಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಿ ಈಗಾಗಲೇ ರಿತಿಕಾ ಕಾಮತ್, ವೃದ್ಧಿ ಶೆಟ್ಟಿ ಮತ್ತು ಸಮಿಯಾ ಹೆಗ್ಡೆ ರಾಜ್ಯಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಬಾಸ್ಕೆಟ್ ಬಾಲ್, ತ್ರೋಬಾಲ್, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಫೂಟ್ಬಾಲ್ ಮತ್ತು ಅಥ್ಲೇಟಿಕ್ಸ್ ತರಬೇತಿ ಪಡೆದು ರಾಷ್ಟç ಹಾಗೂ ರಾಜ್ಯಮಟ್ಟದಲಿ ್ಲಭಾಗವಹಿಸಿರುತ್ತಾರೆ. ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ಹೆಚ್ಚಿಸಲು ವ್ಯಾಪಾರ ಮೇಳಗಳನ್ನು ಹಾಗೂ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಗುತ್ತಿದೆ.

 

 

 

 

 

 

 

 

 

Leave a Reply

Your email address will not be published. Required fields are marked *