Share this news

 

 

 

 

ಕಾರ್ಕಳ. ಅ,29: ವಿದ್ಯಾರ್ಥಿ ಜೀವನದಲ್ಲಿ ಸಮುದಾಯ ಪ್ರಜ್ಞೆಯನ್ನು ಬೆೆಳೆಸಿಕೊಂಡು ಬದುಕನ್ನು ರೂಪಿಸುವಲ್ಲಿ ಸಹಕಾರಿಯಾಗಿ,ತನ್ನ ವ್ಯಕ್ತಿತ್ವದ ವಿಕಸನದೊಂದಿಗೆ ಜೀವನವನ್ನು ಪ್ರಕಾಶಗೊಳಿಸುವ ಮೌಲ್ಯಯುತ ಯೋಜನೆ ರಾ.ಸೇ.ಯೋ ಆಗಿದೆ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಹೇಳಿದರು.
ಅವರು ಕಣಂಜಾರು ಮಡಿಬೆಟ್ಟು ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ನಡೆಯುತ್ತಿರುವ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾ.ಸೇ.ಯೋ.ಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಮಾತುಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರು ಮಾತನಾಡಿ, ಈ ಶಿಬಿರದಲ್ಲಿ ಕಳೆದ ಅನುಭವಗಳು ಜೀವಮಾನವಿಡಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು.
ಕಣAಜಾರು ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟಿನ ಟ್ರಸ್ಟಿ ವಿಕ್ರಮ್ ಹೆಗ್ಡೆ ಮಾತನಾಡಿ, ಶಿಬಿರವು ಮೌಲ್ಯಯುತ ಜೀವನಕ್ಕೆ ದಾರಿ ಮಾಡಿ ಕೊಡುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ತೆರೆದಿದೆ. ಇದರ ಸದುಪಯೋಗವನ್ನು ಶಿಬಿರಾರ್ಥಿ ಪಡೆದುಕೊಂಡಲ್ಲಿ ಯಶಸ್ವಿ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು.
ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು ಧ್ವಜಾರೋಹಣವನ್ನು ನೆರೆವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ಸಿ.ಎ. ಚಂದನ್ ಹೆಗ್ಡೆ, ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ನ ಟ್ರಸ್ಟಿ ಕೆಂಜೂರು ಶಶಿಧರ್ ಶೆಟ್ಟಿ, ಕುಕ್ಕೂಂದೂರು ಉದ್ಯಮಿ ತ್ರಿವಿಕ್ರಮ ಕಿಣಿ, ಉದ್ಯಮಿ ದೇವೇಂದ್ರ ನಾಯಕ್,ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲ ರವಿ ಜಿ., ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಸಾಹಿತ್ಯ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಶೈಲೇಶ್ ಶೆಟ್ಟಿ ಸ್ವಾಗತಿಸಿ, ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖೋಪಾಧ್ಯಾಯರಾದ ಅಶ್ವತ್ಥ್ ಭಾರದ್ವಾಜ್ ಕೆ. ವಂದಿಸಿ, ಜೀವಶಾಸ್ತ್ರ ಉಪನ್ಯಾಸಕರಾದ ಪ್ರಸಾದ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *