ಕಾರ್ಕಳ: ಕಾರ್ಕಳ ಹಾಗೂ ಹೆಬ್ರಿ ಠಾಣಾ ವ್ಯಾಪ್ತಿಯ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪಾರ್ವತಿ (68) ಎಂಬವರು ಬೆಂಗಳೂರಿನಲ್ಲಿ ವಾಸವಿದ್ದು ಅನೇಕ ವರ್ಷಗಳಿಂದ ಬಿಪಿ ಮತ್ತು ಶುಗರ್ ನಿಂದ ಬಳಲುತ್ತಿದ್ದರು. ಕಳೆದ 2 ತಿಂಗಳ ಹಿಂದೆ ಸಾಣೂರಿನ ಮಗಳ ಮನೆಗೆ ಬಂದಿದ್ದ ಅವರು ಅಲ್ಲಿಂದ ತೆಳ್ಳಾರು ಸಾಂತ್ರಬೆಟ್ಟು ಎಂಬಲ್ಲಿನ ತಮ್ಮನ ಮನೆಗೆ ಹೋಗಿದ್ದರು. ಅಲ್ಲಿ ಅವರು ಜ.3 ರಂದು ರಾತ್ರಿ ತಮಗಿರುವ ಬಿಪಿ, ಶುಗರ್ ಖಾಯಿಲೆಯಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಹೆಬ್ರಿಯ ರಾಜು (47) ಅವರು ಉಡುಪಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಅವರಿಗೆ ಮದುವೆಯಾಗಿ 8 ವರ್ಷವಾಗಿದ್ದರೂ ಮಕ್ಕಳಾಗದ ಹಿನ್ನಲೆಯಲ್ಲಿ ಮಾನಸಿಕವಾಗಿ ನೊಂದು ಇತ್ತೀಚೆಗೆ ಮದ್ಯಪಾನ ಮಾಡಲು ಆರಂಭಿಸಿದ್ದರು. ಇದೇ ಕಾರಣಕ್ಕೆ ಮನನೊಂದು ಜ.4 ರಂದು ತನ್ನ ಮನೆಯ ಪಕ್ಕದ ಸಂಬAದಿ ಕೋಚ ಇವರ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.