
ಕಾರ್ಕಳ,ಜೂ. 07: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿರುವ ಆರೋಪದಡಿ ಕಾರ್ಕಳ ನಗರ ಪೊಲೀಸರು ಆರೋಪಿ ಸುಧೀರ್ ಬಂಗೇರ ಎಂಬಾತನನ್ನು ಬಂಧಿಸಿದ್ದಾರೆ.
ಸುರೇಶ್ ಎಂಬವರು ನೀಡಿದ ದೂರಿನಂತೆ, ಫೇಸ್‌ಬುಕ್ ಪೋಸ್ಟ್ ಒಂದರಲ್ಲಿ ರಾಜ್ಯದ ಗೃಹ ಸಚಿವರ ಕುರಿತಾದ ಪೋಸ್ಟ್ ಗೆ ಸುಧೀರ್ ಬಂಗೇರ ಎಂಬಾತ ಅವಹೇಳನಕಾರಿ ಕಾಮೆಂಟ್ ಮಾಡಿರುವುದು ಗಮನಕ್ಕೆ ಬಂದಿದೆ. ಕಾಮೆಂಟ್‌ನಲ್ಲಿ ಸಚಿವರ ಜಾತಿಯನ್ನು ಉಲ್ಲೇಖಿಸಿ ನಿಂದನೆ ಮಾಡಿರುವುದಲ್ಲದೆ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ವೈರತ್ವ ಸೃಷ್ಟಿಸುವ ಉದ್ದೇಶವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
