
ಕಾರ್ಕಳ,ಆ.03: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕಾರ್ಕಳ ಸಾರ್ವಜನಿಕ ಬಸ್ ಸ್ಟಾಂಡ್ ಬಳಿ ಇರುವ ಮಹಾಮ್ಮಾಯಿ ಮುಖ್ಯಪ್ರಾಣ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮಟ್ಕಾ ಜುಗಾರಿ ಆಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳಾದ ಮಿಯ್ಯಾರಿನ ವಿಜೇಂದ್ರ ಶೆಟ್ಟಿ ಹಾಗೂ ಪ್ರಮೋದ್ ಎಂಬವರು ಆ.01 ರಂದು ಮಟ್ಕಾ ಆಡುತ್ತಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಾರ್ಕಳ ನಗರ ಠಾಣಾ ,ಪೊಲೀಸ್ ಉಪನಿರೀಕ್ಷಕರಾದ (ತನಿಖೆ) ಶಿವಕುಮಾರ್ ಎಸ್ ಆರ್ ಅವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ಆಟಕ್ಕೆ ಬಳಸಿದ್ದ ರೂ.1,415 ನಗದು ಹಾಗೂ ಇನ್ನಿತರ ಪರಿಕರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
