ಕಾರ್ಕಳ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ತೆಗೆದ ಮರಳನ್ನು ಸಾಗಾಟ ಮಾಡುತ್ತಿದ್ದಾಗ ತಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಅಡ್ಡೂರು ಎಂಬಲ್ಲಿ ಸರ್ಕಾರಿ ಸ್ಥಳದಿಂದ ಸ್ಥಳೀಯ ವ್ಯಕ್ತಿಯೊಬ್ಬ ತೆಗೆದು ನೀಡಿದ ಮರಳನ್ನು ಟಿಪ್ಪರ್ ಲಾರಿ ಮಾಲೀಕ ನಿಸಾರ್ ಹಾಗೂ ಚಾಲಕ ಪ್ರವೀಣ ಎಂಬವರ ಸೇರಿಕೊಂಡು ಜ.9 ರಂದು ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಸರ್ವಜ್ಜ ಸರ್ಕಲ್ ಎಂಬಲ್ಲಿ ತಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.