Share this news

ಕಾರ್ಕಳ: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ಶುಕ್ರವಾರ ರಾತ್ರಿ ವಶಪಡಿಸಿಕೊಡಿದ್ದಾರೆ.
ಮಂಗಳೂರಿನ ಅಡ್ಡೂರು ಎಂಬಲ್ಲಿನ ಹೊಳೆಯಿಂದ ರಾಶೀಕ್ ಅಡ್ಡೂರು ಎಂಬಾತ ಕಳವು ಮಾಡಿ ನೀಡಿದ ಮರಳನ್ನು ಸಂಪತ್ ಎಂಬಾತ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರ ಸರ್ವಜ್ಙ ಸರ್ಕಲ್ ಬಳಿ ಪುಲಕೇರಿ ಬೈಪಾಸ್ ಕಡೆಯಿಂದ ಜೋಡುರಸ್ತೆ ಕಡೆಗೆ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *