Share this news

ಕಾರ್ಕಳ: ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನಲ್ಲಿ 2 ಕಡೆ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕು ಕಸಬಾ ಗ್ರಾಮದಲ್ಲಿ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಸಬಾ ನಿವಾಸಿ ಪ್ರತಿಮಾ(53) ಆತ್ಮಹತ್ಯೆ ಮಾಡಿಕೊಂಡವರು. ಪ್ರತಿಮಾ ಅವರಿಗೆ ಮಾನಸಿಕ ಖಾಯಿಲೆ ಇದ್ದು, ಚಿಕಿತ್ಸೆ ಪಡೆದಿದ್ದರು. ಆದರೆ ಯಾವುದೋ ಕಾರಣಕ್ಕೆ ಸೆ.2 ರಂದು ಮನೆಯ ಬಳಿಯಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ನೂರಾಳ್ ಬೆಟ್ಟು ಗ್ರಾಮದ ಪುಂಪಾಜೆ ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊAಪಾಜೆ ನಿವಾಸಿ ಬಾಳಪ್ಪ (56) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಬಾಳಪ್ಪ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಸೋಮವಾರ ರಾತ್ರಿ ಕುಡಿದು ಮನೆಗೆ ಬಂದವರು ಗಲಾಟೆ ಮಾಡಿ ಪಕ್ಕದಲ್ಲಿದ್ದ ಶೆಡ್ ಗೆ ಹೋಗಿ ಮಲಗಿದ್ದರು. ಮಂಗಳವಾರ ಮುಂಜಾನೆ ಮನೆಗೆ ಬಂದು ಮತ್ತೆ ಶೆಡ್ ಗೆ ಹೋಗಿದ್ದ ಬಾಳಪ್ಪ ಅಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

                        

                          

                        

                       

Leave a Reply

Your email address will not be published. Required fields are marked *