ಕಾರ್ಕಳ : ಕಾರ್ಕಳ ಕಾಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 40ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಸಮಿತಿಯ ಅಧ್ಯಕ್ಷರಾದ ನವೀನ್ ದೇವಾಡಿಗ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ, ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿ ಗಣೇಶೋತ್ಸವವನ್ನು ವಿಜೃಂಭಣೆಯಿAದ ಆಚರಿಸುವಂತೆ ಕರೆ ನೀಡಿ, ಕಾರ್ಯಕ್ರಮದ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ನವೀನಚಂದ್ರ ಶೆಟ್ಟಿ, ಗೌರವ ಸಲಹೆಗಾರ ಎಚ್ ಕೃಷ್ಣದಾಸ ಶೆಣೈ , ಕಾರ್ಯದರ್ಶಿ ಎನ್. ಕೃಷ್ಣಪ್ಪ ಶೆಟ್ಟಿ, ಕೋಶಾಧಿಕಾರಿ ಪ್ರೇಮಾನಂದ ಶೆಣೈ ಉಪಸ್ಥಿತರಿದ್ದರು.
ಗೌರವ ಸಲಹೆಗಾರ ವೈಕುಂಠ ಶೆಣೈರವರು ಸ್ವಾಗತಿಸಿ, ಕಾರ್ಯಧ್ಯಕ್ಷ ರಾಜೇಶ್ ಭಟ್ ಜಿ ವಂದಿಸಿದರು. ಶ್ರೀಮತಿ ಶೋಭಾ ಭಾಸ್ಕರ್ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸರ್ವಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.