ಕಾರ್ಕಳ: ಕಳೆದ ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿದ್ದ ಡೀಮ್ಡ್ ಅರಣ್ಯ ಸಮಸ್ಯೆಯನ್ನು ನಮ್ಮ ಸರ್ಕಾರ ಇತ್ಯರ್ಥಪಡಿಸಿದ ಪರಿಣಾಮವಾಗಿ ಕಾರ್ಕಳ ತಾಲೂಕಿನಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಹಕ್ಕುಪತ್ರಗಳನ್ನು ವಿತರಿಸಲು ಸಾಧ್ಯವಾಯಿತು. ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ ಯಾವ ಅರ್ಜಿಯನ್ನೂ ಕೂಡ ತಿರಸ್ಕರಿಸದೇ, ಅರ್ಜಿ ವೀಲೇವಾರಿಗೆ ಎದುರಾಗುವ ತಾಂತ್ರಿಕ ತೊಡಕುಗಳನ್ನು ನಿವಾರಿಸಿ ಆದ್ಯತೆಮೇರೆಗೆ ಎಲ್ಲಾ ಅರ್ಜಿದಾರರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಿವೇಶನರಹಿತ ಹಕ್ಕುಪತ್ರ ವಿತರಿಸಿ ಮಾತನಾಡಿ, ಡೀಮ್ಡ್ ಅರಣ್ಯ ತೊಡಕು ನಿವಾರಣೆಯಾಗಿದ್ದರೂ ಕುಮ್ಕಿ ಜಮೀನಿನಲ್ಲಿ ಮನೆಕಟ್ಟಿಕೊಂಡವರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ,ಆದ್ದರಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಚಾಲ್ತಿಯಲ್ಲಿರುವ ಕುಮ್ಕಿ ಜಮೀನು ವಿಚಾರದಲ್ಲಿ ತಿದ್ದುಪಡಿ ಮಾಡುವಂತೆ ಕಂದಾಯ ಸಚಿವರ ಬಳಿ ಮಾತುಕತೆ ನಡೆಸಿದ್ದು ಸಚಿವರು ಸ್ಪಂದಿಸುವ ಭರವಸೆ ನೀಡಿದ್ದಾರೆ, ಆದ್ದರಿಂದ ಮುಂದಿನ ದಿನಗಳಲ್ಲಿ ಕುಮ್ಕಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿರುವ 1500 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ ವಿತರಿಸಲಾಗುವುದು ಎಂದು ಸುನಿಲ್ ಕುಮಾರ್ ಭರವಸೆ ನೀಡಿದರು.
ಕಾರ್ಕಳ ತಾಲೂಕಿನ 74 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಇದೇವೇಳೆ ಕಾರ್ಮಿಕ ಇಲಾಖೆಯ ವತಿಯಿಂದ ಗಾರೆ ಕಾರ್ಮಿಕರಿಗೆ 250 ಗಾರೆ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನರಸಪ್ಪ ತಹಸೀಲ್ದಾರ್, ತಾ.ಪಂ ಇಓ ಗುರುಶಾಂತಪ್ಪ, ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ರಿಯಾಜ್ ಅಹಮ್ಮದ್ ಫಲಾನುಭವಿಗಳ ಪಟ್ಟಿ ವಾಚಿಸಿದರು.
ಉಪತಹಶೀಲ್ದಾರ್ ಮಂಜುನಾಥ ನಾಯಕ್ ಹಾಗೂ ಗ್ರಾಮ ಕರಣಿಕರು ಸಹಕರಿಸಿದರು
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.