
ಕಾರ್ಕಳ: ಕೆ. ಎಮ್.ಇ.ಎಸ್ ವಿದ್ಯಾ ಸಂಸ್ಥೆಯಲ್ಲಿ ಪೂರ್ವ ಪ್ರಾರ್ಥಮಿಕ ವಿಭಾಗದ ಪೋಷಕರಿಗೆ “ಮಿನಿ ಒಲಂಪಿಕ್ಸ್” ಎಂಬ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ “FRIENDS POWER GYM AND LADIES FITNESS HOUSE JODRASTE” ಸಂಸ್ಥೆಯ ನಿರ್ದೇಶಕರಾದ ಮೊಹಮ್ಮದ್ ಅಲಿ ಅವರು, ಇಂತಹ ಕಾರ್ಯಕ್ರಮಗಳನ್ನು ವಿದ್ಯಾಸಂಸ್ಥೆಗಳಲ್ಲಿ ಆಯೋಜಿಸುವುದರಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕ್ರೀಡಾಮನೋಭಾವ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.
ಮತ್ತೋರ್ವ ಅತಿಥಿ ALWYN SOUNDS AND DECORATION NAKRE ಇದರ ಮಾಲಕರಾದ ಶ್ರೀಮತಿ ಜಸಿಂತ ಡಿ ಅಲ್ಮೆಡ ಇವರು, ಈಗಿನ ಬಿಡುವಿಲ್ಲದ ಸಮಯದಲ್ಲೂ ಆಟ-ಪಾಠಗಳಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಯಶಸ್ಸಿನಲ್ಲಿಯೇ ಸಂತಸಪಡುವ ಪಾಲಕರು ಸ್ವತಃ ಕ್ರೀಡೆಗಳಲ್ಲಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿಯೊಂದಿಗೆ ಸಂಭ್ರಮಿಸಿದ ಕ್ಷಣ ಇಂದಿನದಾಗಿದೆ ಎಂದರು.
ಸಂಸ್ಥೆಯ ಪ್ರಾಂಶುಪಾಲರಾದ ಕೆ. ಬಾಲಕೃಷ್ಣ ರಾವ್
, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಾಟ್ಕರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲೊಲಿಟ.ಡಿ. ಸಿಲ್ವ ಹಾಗೂ ಶಿಕ್ಷಕರು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
