ಕಾರ್ಕಳ : ತಾಲೂಕು ಕಚೇರಿ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಭೂ ಸುರಕ್ಷಾ ಯೋಜನೆಗೆ ಶಾಸಕ ವಿ. ಸುನಿಲ್ ಕುಮಾರ್ ಇಂದು ಚಾಲನೆ ನೀಡಿದರು.
ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿ ಪರಿವರ್ತನೆ, ರೆಕಾರ್ಡ್ ರೂಂ ಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದ್ದಲು ಅಸಾಧ್ಯ, ನೇರವಾಗಿ ಡಿಜಿಟಲ್ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ ಇತ್ಯಾದಿ ಯೋಚನೆಗಳ ತ್ವರಿತ ಆಡಳಿತ ಸೇವೆಯನ್ನು ಈ ಯೋಜನೆಯಲ್ಲಿ ಒದಗಿಸಲಾಗುವುದು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಮಹೇಶ್, ತಹಶೀಲ್ದಾರ್ ಪ್ರದೀಪ್ ಆರ್, ಉಪತಹಶಿಲ್ದಾರ್ ಮಂಜುನಾಥ್, ಹರಿಪ್ರಸಾದ್, ನಮಿತಾ, ಆಹಾರ ಶಿರಸ್ತೆದಾರ್ ಶಹಾನಾಜ್, ಕಾರ್ಕಳ ಅಜೆಕಾರು ಕಂದಾಯ ನಿರೀಕ್ಷಕರು, ಅಕ್ರಮ ಸಕ್ರಮ ಸಮಿತಿ ಸದಸ್ಯ ನವೀನ್ ದೇವಾಡಿಗ, ಭೂ ನ್ಯಾಯ ಮಂಡಳಿ ಸದಸ್ಯ ಸುನಿಲ್ ಭಂಡಾರಿ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.