Share this news

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಮೈನ್ ಕಾರ್ಕಳದ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆಯಿತು.

ಮೊಬೈಲ್ ಅಪ್ಲಿಕೇಶನ್ ವಿದ್ಯುನ್ಮಾನ ಮತಯಂತ್ರ ಬಳಸುವುದರ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆಯ ಬಗ್ಗೆ ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ ತಿಳಿಸಿಕೊಟ್ಟರು. ಪಿಆರ್‌ಒ ಮತ್ತು ಎಪಿಆರ್‌ಒ, ಮತಗಟ್ಟೆ ಅಧಿಕಾರಿಗಳಾಗಿ ಶಾಲಾ ಶಿಕ್ಷಕಿಯರು ಸಹಕರಿಸಿದರು.

ಚುನಾವಣೆಯಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಅಭಯ್ ಹಾಗೂ ಉಪನಾಯಕನಾಗಿ 7ನೇತರಗತಿಯ ರಮಿತ್ ಬಹುಮತದಿಂದ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಅಭಿನಂದಿಸಿದ್ದಾರೆ.

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *