ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಆಟಿ ತಿಂಗಳ ವಿಶೇಷ ಕೂಟವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು.
ಶಾಲೆಯ ಹಿರಿಯ ಪೂರ್ವ ವಿದ್ಯಾರ್ಥಿ ಹಾಗೂ ಖ್ಯಾತ ಲೆಕ್ಕ ಪರಿಶೋಧಕ ಕಾರ್ಕಳ ಕಮಲಾಕ್ಷ ಕಾಮತ್ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಮಾಲಾಶ್ರೀ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಿ.ಆರ್.ಸಿ ಕೋ ಆರ್ಡಿನೇಟರ್ ಸಂತೋಷ ಕುಮಾರ್ ಶೆಟ್ಟಿ, ಬಿ.ಆರ್.ಪಿ ಹಾಗೂ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೆ ಎಸ್, ಎಸ್ ಡಿ ಎಂ ಸಿ ಉಪಾಧ್ಯಕ್ಷ ಪರಸಪ್ಪ ಜೋಗಿನ, ಶಾಲಾ ಶಿಕ್ಷಕಿಯರಾದ ಅಶ್ವಿನಿ, ಶ್ರೇಯಾ, ಪೂಜಾ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿ ಪೋಷಕರು ತಯಾರಿಸಿದ ಸುಮಾರು ಮೂವತ್ತು ಬಗೆಯ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ ಸಹಭೋಜನವನ್ನು ಆಯೋಜಿಸಲಾಯಿತು.
ಮುಖ್ಯೋಪಾಧ್ಯಾಯಿನಿ ಶಶಿಕಲಾ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಶಿಕ್ಷಕಿ ಮಧುಶ್ರೀ ವಂದಿಸಿದರು. ಪದವೀಧರ ಸಹ ಶಿಕ್ಷಕಿ ಪ್ರತಿಮಾ ದೇವದಾಸ್ ನಿರೂಪಿಸಿದರು.














`
