ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಘಟನೆ ನೀರೆ ಗ್ರಾಮದಲ್ಲಿ ಸಂಭವಿಸಿದೆ.
ನೇಣಿಗೆ ಶರಣಾದ ವ್ಯಕ್ತಿಯನ್ನು ಅಶೋಕ (45) ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ನ. 8ರ ರಾತ್ರಿ 10 ಗಂಟೆಯಿಂದ ನ. 9ರ ಬೆಳ್ಳಗಿನ ಜಾವ 3 ಗಂಟೆಯ ನಡುವೆ ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಶೋಕ್ ರವರು ಕಾಲಿನ ನರದ ಸಮಸ್ಯೆಯಿಂದ ಬಳಲುತ್ತಿದ್ದರು ಹಾಗೂ ಮದ್ಯ ಸೇವನೆಯ ಚಟ ಹೊಂದಿದ್ದರು.ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.