ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ಮಾಳ ನಿವಾಸಿ ರಾಜು (40) ಮೃತಪಟ್ಟವರು. ಅವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಫೆ. 18 ರಂದು ಮಾಳ ಗ್ರಾಮದ ಪೆರ್ಮುಡೆ ಬರಿ ಎಂಬಲ್ಲಿ ಕರುಣಾಕರ ಎಂಬವರ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
