ಕಾರ್ಕಳ: ಸಕ್ಕರೆ ಖಾಯಿಲೆಯಿಂದ ತನ್ನ ಒಂದು ಕಾಲನ್ನು ಕಳೆದುಕೊಂಡಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಾಂತಾವರ ಗ್ರಾಮದ ಬೇಲಾಡಿ ನ್ಯಾಯತೋಟ ಎಂಬಲ್ಲಿ ಜ.11 ರಂದು ನಡೆದಿದೆ.
ಶಿವಪ್ರಸಾದ್ ಎಂಬವರು ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಬಾಲ್ಯದಿಂದಲೂ ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ 1 ವರ್ಷದ ಹಿಂದೆ ಖಾಯಿಲೆ ಉಲ್ಬಣಗೊಂಡು ಒಂದು ಕಾಲನ್ನು ಕಳೆದುಕೊಂಡಿದ್ದ ಅವರಿಗೆ ಆಗಾಗ ಖಾಯಿಲೆ ಹೆಚ್ಚಾಗುತ್ತಿತ್ತು. ಜ.11 ರಂದು ಮನೆಯಲ್ಲಿ ಏಕಾಏಕ ಕುಸಿದು ಬಿದ್ದಿದ್ದ ಅವರನ್ನು ಕಾರ್ಕಳ ಸಿಟಿ ಆಸ್ಪತ್ರೆಗೆ ಕರೆದೊಯ್ದು ಅಲ್ಲಿನ ವೈದ್ಯರು ಪರೀಕ್ಷಿಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದು, ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಶಿವಪ್ರಸಾದ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.