
ಕಾರ್ಕಳ, ಮಾ.7: ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಾ. 4 ರಂದು ನಡೆದಿದೆ.
ಟಿ.ಉನ್ನಿ (48) ಎಂಬವರು ರಬ್ಬರ್ ತೋಟ ಲೀಸ್ ಗೆ ವಹಿಸಿಕೊಂಡು ಕೆಲಸ ಮಾಡಿಸುತ್ತಿದ್ದು, ಕಳೆದ 2 ವರ್ಷಗಳಿಂದ ನಲ್ಲೂರಿನ ಧನಂಜಯ ಜೈನ್ ಅವರ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಾ.4 ರಂದು ಮಧ್ಯಾಹ್ನ ಬಾಡಿಗೆ ಮನೆಯಲ್ಲಿ ಮಲಗಿದ್ದವರು ಸಂಜೆ ಕೆಲಸದವರು ಬಂದಾಗ ಏಳದೇ ಇದ್ದು, ಕೂಡಲೇ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಆ ವೇಳೆಗಾಗಲೇ ಮೃತಪಟ್ಟಿದ್ದರು.
ಮೃತರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಕಳೆದ 16 ವರ್ಷದ ಹಿಂದೆ ಸ್ಟಂಟ್ ಅಳವಡಿಸಲಾಗಿತ್ತು. ಆದ್ದರಿಂದ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
