ಕಾರ್ಕಳ: ವಿಪರೀತ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮಾಳ ಗ್ರಾಮದ ನಿವಾಸಿ ಸ್ಕರಿಯ(50) ಎಂಬವರು ಒಂದು ವಾರದ ಹಿಂದೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿಯ ಗ್ರೀನ್ ವ್ಯಾಲಿ ಎಸ್ಟೇಟ್ ಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಬಂದಿದ್ದರು. ಅಲ್ಲಿ ಜುಲೈ.20 ರಂದು ವಿಪರೀತ ಜ್ವರದಿಂದ ಬಳಲುತ್ತಿದ್ದ ಅವರಿಗೆ ಪತ್ನಿ ಮತ್ತು ಮಗಳು ಕಾರ್ಕಳ ನಿಟ್ಟೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಯ್ಯುವ ವೇಳೆಗೆ ಸ್ಕರಿಯ ಅವರು ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.