
ಕಾರ್ಕಳ, ಜೂ. 21: ಕಾರ್ಕಳ ತಾಲೂಕಿನ ಈದು ಗ್ರಾಮದ ಕುರಿಯರು ಮನೆ ಎಂಬಲ್ಲಿ ಸುಮಾರು ಕಳೆದ 4 ವರ್ಷಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ಕುರಿಯರು ಮನೆ ನಿವಾಸಿ ನಾಗೇಶ್(40) ಎಂಬವರು ಸುಮಾರು 4 ವರ್ಷದಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ, ಫಾದರ್ ಮುಲ್ಲರ್ ಮತ್ತು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದರು. ಆದರೆ ವಿಪರೀತ ಮದ್ಯಪಾನದ ಚಟ ಹೊಂದಿದ್ದ ಅವರು ಮತ್ತೆ ಮತ್ತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಸಂಪೂರ್ಣವಾಗಿ ಗುಣಮುಖರಾಗಿರಲಿಲ್ಲ.
ಶನಿವಾರ (ಜೂ. 20) ಸಂಜೆಯ ವೇಳೆ ಮನೆಯಲ್ಲಿದ್ದಾಗ ಅವರಿಗೆ ಏಕಾಏಕಿ ಉಸಿರು ಕಟ್ಟಿದಂತೆ ಆಗಿತ್ತು. ಕೂಡಲೇ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಮೃತಪಟ್ಟಿದ್ದರು.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
