ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಬಲ ತುಂಬುವ ನಿಟ್ಟಿನಲ್ಲಿ ಕಾರ್ಕಳ ಮಂಗಳೂರು ಮಾರ್ಗದ ಸರ್ಕಾರಿ ಬಸ್ ಗೆ ಮಂಗಳವಾರ ಕಾರ್ಕಳದ ಬಂಡಿಮಠದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಮುನಿಯಾಲು ಉದಯ ಶೆಟ್ಟಿ, ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಮುಂತಾದವರು ಉಪಸ್ಥಿತರಿದ್ದರು.