ಕಾರ್ಕಳ: ಕಳೆದ ಒಂದೂವರೆ ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಕಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಇಂದು ನಡೆಯಲಿದೆ. ಬಿಜೆಪಿಗೆ ಸ್ಪಷ್ಟ ಬಹುಮತವಿರುವ ಹಿನ್ನಲೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ.
ಪುರಸಭೆಯ ಒಟ್ಟು 23 ಸದಸ್ಯಬಲದಲ್ಲಿ ಪ್ರಸ್ತುತ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಸ್ಥಾನಗಳನ್ನು ಪಡೆದಿದ್ದರೆ, ಓರ್ವ ಪಕ್ಷೇತರ ಸದಸ್ಯರಿದ್ದಾರೆ. ಇದರ ಜೊತೆಗೆ ಶಾಸಕರು ಹಾಗೂ ಸಂಸದರು ಸೇರಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಒಟ್ಟು 25 ಮತಗಳು ಪರಿಗಣಿತವಾಗಲಿದೆ.ಈ ಪೈಕಿ 13 ಮತಗಳು ಬಿಜೆಪಿಗೆ ಚಲಾವಣೆಯಾಗುವ ಹಿನ್ನಲೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ.
ಇತ್ತ 11 ಸದಸ್ಯಬಲ ಇರುವ ಕಾಂಗ್ರೆಸ್ ಕೂಡ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲಿದೆ ಎನ್ನುವ ಮಾಹಿತಿಯಿದ್ದು, ಯಾರು ಸ್ಪರ್ಧಿಸಲಿದ್ದಾರೆ ಎನ್ನುವ ಗುಟ್ಟನ್ನು ಕಾಂಗ್ರೆಸ್ ಬಿಟ್ಟುಕೊಟ್ಟಿಲ್ಲ. ಯೋಗೀಶ್ ದೇವಾಡಿಗ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಕೋಟ್ಯಾನ್, ಪ್ರದೀಪ್ ರಾಣೆ ಹೆಸರುಗಳು ಪ್ರಸ್ತಾಪವಾಗಿದ್ದು, ಅಂತಿಮವಾಗಿ ಉಪಾಧ್ಯಕ್ಷ ಸ್ಥಾನ ಮಹಿಳೆಯ ಪಾಲಿಗೆ ಒಲಿದರೂ ಅಚ್ಚರಿಯಿಲ್ಲ.
`