ಕಾರ್ಕಳ: ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಹನಿಟ್ರ್ಯಾಪ್ ಪ್ರಕರಣದ ಆರೋಪಿ ನಿರೀಕ್ಷಾಳನ್ನು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚಿಗಷ್ಟೆ ಕಾರ್ಕಳದ ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗೂ ಮೊದಲು ಬರೆದಿಟ್ಟ ಡೆತ್ ನೋಟ್ ನಲ್ಲಿಆರೋಪಿ ನಿರೀಕ್ಷಾ ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಿದ್ದ.
ಡೆತ್ನೋಟ್ ನಲ್ಲಿ ನಿರೀಕ್ಷಾ ತನ್ನ ರೂಮಿನಲ್ಲಿದ್ದ ಇತರ ಹುಡುಗಿಯರ ಪೋಟೋ ಮತ್ತು ವಿಡಿಯೋಗಳನ್ನು ಗುಪ್ತ ಕ್ಯಾಮರಾದಲ್ಲಿ ತೆಗೆದಿಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಅಭಿಷೇಕ್ ಬರೆದಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಯುವತಿಯರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ನಿರೀಕ್ಷಾ ತಮ್ಮ ವಿಡಿಯೋಗಳನ್ನು ಸೆರೆ ಹಿಡಿದು ಇತರರಿಗೆ ಹಂಚಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ನಿರೀಕ್ಷಾಳನ್ನು ಕಂಕನಾಡಿಯ ಬಾಡಿಗೆಯ ಮನೆಯಿಂದ ಅರೆಸ್ಟ್ ಮಾಡಿದ್ದಾರೆ. ಬಂಧಿತಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.