ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಂಚಿಕಟ್ಟೆ ಎಂಬಲ್ಲಿ ಬೈಕಿಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಫಯಾಜ್ ಎಂಬವರು ಎ.12 ರಂದು ತಮ್ಮ ಬೈಕಿನಲ್ಲಿ ಬಂಗ್ಲೆಗುಡ್ಡೆ ಜಂಕ್ಷನ್ ಕಡೆಯಿಂದ ಬಂಡೀಮಠ ಕಡೆಗೆ ಹೋಗುತ್ತಿದ್ದಾಗ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಂಚಿಕಟ್ಟೆ ಬಳಿಯ ಶೋ ರೂಮ್ ಬಳಿ ಯೂ ಟರ್ನ್ ಮಾಡಿಕೊಂಡು ಹೋಗುವಾಗ ಹಿಂಬAದಿಯಿAದ ಬಂದ ಬೈಕ್ ಡಿಕ್ಕಿ ಹೊಡೆದಿದ್ದು ಫಯಾಜ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಕಾರ್ಕಳದ ಸಿಟಿ ನರ್ಸಿಂಗ್ ಹೋಂ ನಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ನ್ಯೂ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.