Share this news

ಕಾರ್ಕಳ: ಕಾರ್ಕಳ ಬೈಲೂರಿನ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ರನ್ನು ಅಮಾನತು ಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮನ ಕಂಚಿನ ಪ್ರತಿಮೆಯ ಸ್ಥಾಪನೆ ಮತ್ತು ಥೀಂ ಪಾರ್ಕ್ ನ ನಿರ್ಮಾಣದ ಕಾಮಗಾರಿ ಯನ್ನು ಉಡುಪಿಯ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ, ಆಡಳಿತ್ಮಾತಕ ಮಂಜೂರಾತಿಗೊAಡಿದ್ದು ಈ ಪೈಕಿ ರೂ.672.00ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸದೇ, ಸಂಬAಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ, ಕಾಮಗಾರಿಯ ಗುಣಮಟ್ಟದ ಬಗ್ಗೆ ಆರೋಪಗಳಿರುವುದರಿಂದ ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ ವಿರೋಧ ಚರ್ಚೆಗಳು ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.

ಅಲ್ಲದೆ ಈ ಪ್ರಕರಣದ ಬಗ್ಗೆ ಸಿಒಡಿ ತನಿಖೆ ಹಾಗೂ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದ್ದು, ತನಿಖೆಗೆ ಅಡಚಣೆ ಆಗುವ ಸಾಧ್ಯತೆ ಇರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಇವರ ಸ್ಥಾನಕ್ಕೆ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ನೀಡಿ ಆದೇಶಿಸಿದೆ.

                        

                          

                        

                          

 

`

Leave a Reply

Your email address will not be published. Required fields are marked *