ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟಿರುವ ಘಟನೆ ಕಾರ್ಕಳ ಆನೆಕೆರೆ ಮಸೀದಿ ಬಳಿ ಜ.31 ರಂದು ನಡೆದಿದೆ.
ಕಸಬಾ ನಿವಾಸಿ ಹರೀಶ್ (60ವ) ಎಂಬವರು ಶುಕ್ರವಾರ ಆನೆಕೆರೆ ಮಸೀದಿ ಬಳಿ ಮೂರು ಮಾರ್ಗ ಕಡೆಯಿಂದ ಆನೆಕೆರೆ ಕಡೆಗೆ ಹಾದು ಹೋಗಿರುವ ಸಾರ್ವಜನಿಕ ರಸ್ತೆಯ ಮಣ್ಣು ರಸ್ತೆಯಲ್ಲಿ ತನ್ನ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದ.
ಅಪಘಾತಕ್ಕೆ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಹರೀಶ್ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಅವರು ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.