
ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಪಾದಾಚಾರಿಗೆ ಕಾರು ಡಿಕ್ಕಿಯಾಗಿ ಪಾದಾಚಾರಿ ಮೃತಪಟ್ಟಿರುವ ಘಟನೆ ಮಂಗಳವಾರ ಜೋಡುರಸ್ತೆಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಮಹಾಬಲ ಮೊಯಿಲಿ (86) ಎಂಬುವವರು ಹಿರ್ಗಾನ ಕಡೆಯಿಂದ ಜೋಡುರಸ್ತೆಯಲ್ಲಿರುವ ತನ್ನ ಮನೆ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿರ್ಗಾನ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಮಹಾಬಲ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

