

ಕಾರ್ಕಳ,ಸೆ.28: ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೆಂಪುಗುಡ್ಡೆಯ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿರಿಸಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆ ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್ಐ(ತನಿಖೆ) ನವೀನ್ ಪಿ ಬೋರ್ಕರ್ ಮತ್ತವರ ತಂಡ ದಾಳಿ ನಡೆಸಿ ಆಟಕ್ಕೆ ಬಳಸಿದ್ದ ಕೋಳಿಗಳು ಮತ್ತು ನಗದನ್ನು ವಶಪಡಿಸಿಕೊಂಡಿದ್ದು, ಆರೋಪಿಗಳಾದ ಸುನಿಲ್ ಡಿ ಸೋಜಾ, ಹರೀಶ್ ಭಂಡಾರಿ, ಶ್ರೀನಿವಾಸ, ರಾಜೇಶ್ ಮತ್ತು ಅರುಣ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
