
ಕಾರ್ಕಳ,ಏ.16: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಪ್ರದೇಶದ ಸರ್ವೇ ನಂ.281ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಕುರಿತು ಸಾರ್ವಜನಿಕರ ಖಚಿತ ಮಾಹಿತಿಯ ಮೇರೆಗೆ, ಕಾರ್ಕಳ ನಗರ ಪೊಲೀಸ್ ಠಾಣೆಯ ಎಸ್ಐ ಮುರಳೀಧರ ನಾಯ್ಕ್ ನೇತೃತ್ವದ ಪೊಲೀಸರ ತಂಡ ಬುಧವಾರ ದಾಳಿ ನಡೆಸಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಮನೋಜ್ ಮತ್ತು ಶರಣ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೇವೇಳೆ ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರಗಳನ್ನು ಹಾಗೂ ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಗಣಿಗಾರಿಕೆ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















.
.
.
.
.
.
.
.
.
.
