ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕಾರ್ಕಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾರ್ಕಳ ತಾಲೂಕಿನ ಜನ ಜಾಗೃತಿ ವೇದಿಕೆ ತ್ರೈಮಾಸಿಕ ಸಭೆ ಸೋಮವಾರ ಕಾರ್ಕಳ ಯೋಜನಾ ಕಚೇರಿಯಲ್ಲಿ ನಡೆಯಿತು.
ಜನಜಾಗೃತಿ ಸದಸ್ಯರಾದ ಮಿತ್ರ ಪ್ರಭ ಹೆಗ್ಡೆ ಹಾಗು ಸಾವಿತ್ರಿ ಮನೋಹರ್ ಕಾರ್ಯಕ್ರಮ ಉದ್ಘಾಟಿಸಿದರು.ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಉದಯ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಅಕ್ಟೋಬರ್ 7 ರಂದು ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಗಾಂಧಿ ಸ್ಮೃತಿ ಕಾರ್ಯಕ್ರಮಕ್ಕೆ ಪೂರ್ವ ತಯಾರಿ, ಜನಜಾಗೃತಿ ಕಾರ್ಯಕ್ರಮಗಳ ಆಯೋಜನೆ ಹಾಗೂ ನವ ಜೀವನ ಸಮಿತಿಗಳ ಬಲಪಡಿಸುವಿಕೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ಸದಸ್ಯರಾದ ಕಮಲಾಕ್ಷ ನಾಯಕ್, ಹರಿಶ್ಚಂದ್ರ ತೆಂಡೂಲ್ಕರ್, ತ್ರಿವಿಕ್ರಂ ಕಿಣಿ, ವೃಷಭ ರಾಜ್ ಕಡಂಬ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ, ತಾಲೂಕಿನ ಜನಜಾಗೃತಿ ಸದಸ್ಯರು ಹಾಗೂ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.