ಕಾರ್ಕಳ :ಶುಕ್ರವಾರ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಮೂರನೇ ಆರೋಪಿ ಕಾರ್ಕಳದ ಅಭಯ್(23) ನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಭಯ್ ಪ್ರಮುಖ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ನೀಡಿದ್ದಾಗಿ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಕೃತ್ಯ ಎಸಗಿದ ಮೇಲೆ, ಪ್ರಮುಖ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ನೀಡಿದ ಆರೋಪದಲ್ಲಿ ಇದೀಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ನಡೆಸಿ ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸಿ, ಆದಷ್ಟು ಬೇಗನೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
`