Share this news

 

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ತೋಟವೊಂದರಲ್ಲಿ ಶ್ರೀಗಂಧದ ಮರಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಠಾಣಾ ಪೋಲೀಸರು ಮೂವರನ್ನು ಬಂಧಿಸಿದ್ದಾರೆ .
ಕುಕ್ಕುಂದೂರು ಗ್ರಾಮದ ಗಣೇಶ್ , ಮರ್ಣೆ ಗ್ರಾಮದ ಸಂತೋಷ್ ಹಾಗೂ ಬಂಟ್ವಾಳ ತಾಲೂಕಿನ ಇರರ ಗ್ರಾಮದ ಮೋಯ್ದಿನ್ (ಮೊಯ್ದು ಕುಂಞ) ಬಂಧಿತ ಆರೋಪಿಗಳು.

ಕಳೆದ ಜೂನ್ 17ರಂದು ನಿಟ್ಟೆಯ ಹೇನೊಟ್ಟುವಿನ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಿಂದ 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರಗಳು ಕಳ್ಳತನವಾಗಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಇದೀಗ 3 ಆರೋಪಿಗಳನ್ನು ಬಂಧಿಸಿ ಕಳವಾದ ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಶ್ರೀಗಂಧದ ಮರಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *