
ಕಾರ್ಕಳ,ಅ.17: ಕಾರ್ಕಳ ತಾಲೂಕು ಕಸಬಾ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಬೈಕಿಗೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅ.15 ರಂದು ಈ ಅಪಘಾತ ಸಂಭವಿಸಿದ್ದು, ನಿಟ್ಟೆಯ ಸ್ವಸ್ತಿಕ್(15ವ) ಅವರು ತಂದೆ ಸತೀಶ ಅವರೊಂದಿಗೆ ಬೈಕಿನಲ್ಲಿ ಕಾರ್ಕಳದಿಂದ ನಿಟ್ಟೆಗೆ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
