Share this news

ಕಾರ್ಕಳ: ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಮತ್ತು ಕಾರ್ಯಗಾರವು ಕಾರ್ಕಳ ಶಾಸಕರ ವಿಕಾಸ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಆತ್ಮನಿರ್ಭರ ಭಾರತದ ಅಭಿಯಾನದ ಜಿಲ್ಲಾ ವಕ್ತಾರರಾದ ಶ್ರೀಕಾಂತ್ ನಾಯಕ್ ಅಭಿಯಾನದ ಕಾರ್ಯಯೋಜನೆಗಳ ಮಾಹಿತಿ ನೀಡಿದರು.
ರವೀಂದ್ರ ಕುಮಾರ್ ಪ್ರಸ್ತಾವಿಕ ಮಾತುಗಳನ್ನಾಡಿ ಆತ್ಮ ನಿರ್ಭರ ಭಾರತ ಯೋಜನೆಯ ಉದ್ದೇಶ ಹಾಗೂ ಅದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ‍್ಯ ಬಂದರೂ ದೇಶ ಇನ್ನೂ ಸಂಪೂರ್ಣ ಸ್ವಾವಲಂಬಿಯಾಗಿಲ್ಲ, ನಾವೆಲ್ಲರೂ ಸ್ವದೇಶಿ ವಸ್ತುಗಳ ಬಳಕೆಗೆ ಒತ್ತು ನೀಡಬೇಕು, ನಮ್ಮ ಸ್ಥಳೀಯ ಕೈಗಾರಿಕೆ, ವ್ಯಾಪಾರ ಉದ್ಯಮಗಳಿಗೆ ನಾವು ಹೆಚ್ಚಿನ ಬೆಂಬಲ ನೀಡಬೇಕು ಹಾಗೂ ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು. ವಿದೇಶಿ ವಸ್ತುಗಳ ಮೋಹವನ್ನು ಬಿಟ್ಟು ಸ್ವದೇಶೀ ವಸ್ತುಗಳ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಮುಂದೆ ಈ ಅಭಿಯಾನದಡಿಯಲ್ಲಿ ಕಾರ್ಕಳ ಕ್ಷೇತ್ರಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುಲಾಗುವುದು. ನಮ್ಮ ಪ್ರಧಾನಿಯವರ ಆಶಯದಂತೆ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸಲು ಕಾರ್ಕಳ ಬಿಜೆಪಿ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದರು.
ಕಾರ್ಯದರ್ಶಿ ಪ್ರವೀಣ್ ಸಾಲಿಯಾನ್ ಆತ್ಮನಿರ್ಭರ ಭಾರತ್ ಸಂಕಲ್ಪದ ಪ್ರತಿಜ್ಞಾ ವಿಧಿ ಭೋಧಿಸಿದರು,

ಕಾರ್ಯಾಗಾರದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಶರಾದ ಜಯರಾಮ್ ಸಾಲಿಯಾನ್, ಮಾಲಿನಿ ಜೆ ಶೆಟ್ಟಿ, ಸುರೇಶ ಶೆಟ್ಟಿ ಶಿವಪುರ , ರಮೇಶ್ ಶೆಟ್ಟಿ ಶಿವಪುರ, ಮಂಡಲ ಪಧಾಧಿಕಾರಿಗಳು, ವಿವಿಧ ಮಹಾ ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೂತ್ ಪಧಾಧಿಕಾರಿಗಳು ಉಪಸ್ಥಿತರಿದ್ದರು.
ಅಭಿಯಾನದ ಮಂಡಲ ಸಂಚಾಲಕರಾದ ಅನಂತಕೃಷ್ಣ ಶೆಣೈ ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ ವಂದಿಸಿದರು. ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರೂಪಿಸಿದರು

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *